ಜು.24 ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

ಮೈಸೂರು: ಜು.24 ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ (ಜನ್ಮೋತ್ಸವ) ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

ನಾಡದೇವಿ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ ಜುಲೈ 24 ರಂದು ಮುಂಜಾನೆ 5:30 ರಿಂದ ವಿಜೃಂಭಣೆಯಿಂದ ನೆರವೇರಲಿದೆ. ದೇವಾಲಯದಲ್ಲಿ ದೇವಿಗೆ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ಪೂರ್ಣಗೊಂಡ ನಂತರ ಬೆಳಗ್ಗೆ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಬೆಳಗ್ಗೆ 9:30ಕ್ಕೆ ಮಹಾಮಂಗಳಾರತಿ ಬೆಳಗಲಾಗುತ್ತದೆ. ಬೆಳಗ್ಗೆ 10:30ಕ್ಕೆ ಚಾಮುಂಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ಇಟ್ಟು ದೇವಾಲಯದ ಸುತ್ತಲೂ ಮೆರವಣಿಗೆ ನಡೆಸಲಾಗುತ್ತದೆ. ರಾತ್ರಿ 8:30ಕ್ಕೆ ಚಾಮುಂಡೇಶ್ವರಿ ಅಮ್ಮನವರ ಉತ್ಸವ, ಫಲ ಪೂಜೆ, ದರ್ಬಾರೋತ್ಸವ ಹಾಗೂ ಮಂಟಪೋತ್ಸವವನ್ನು ನೆರವೇರಿಸಲಾಗುತ್ತದೆ.

ಇನ್ನು ವರ್ಧಂತಿ ಮಹೋತ್ಸವ ಹಿನ್ನಲೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು ಬೆಟ್ಟಕ್ಕೆ ತೆರಳಲು ನಗರದ ಲಲಿತಮಹಲ್ ಹೆಲಿಪ್ಯಾಡ್ ನಿಂದ ಉಚಿತ ಬಸ್ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

Scroll to Top