ಕೊಡಗು: ಕೊಡಗಿನಲ್ಲಿ ನಾಳೆಯಿಂದ 22ರವರೆಗೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಜಿಲ್ಲೆಯಾದ್ಯಂತ 5 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಅವಧಿಯಲ್ಲಿ 115.6 ರಿಂದ 204.4 ಮಿ.ಮೀ.ವರೆಗೂ ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಜಿಲ್ಲೆಗೆ ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಆಪತ್ಕಾಲದಲ್ಲಿ ಸಂಪರ್ಕಿಸಲು ಜಿಲ್ಲಾಡಳಿತದ ಸಹಾಯ ವಾಣಿ ಸಂಖ್ಯೆಯನ್ನು ನೀಡಿದೆ. ಪ್ರಕೃತಿ ವಿಕೋಪ ಸಂಬಂಧಿಸಿ ಯಾವುದೇ ಸಮಸ್ಯೆಗಳಿಗೆ ದೂರವಾಣಿ: 08272-221077 ಅನ್ನು ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.