ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಲೋಕದ ಮಹಾತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಗಗನನೌಕೆ ಸೋಮವಾರ ಅಪರಾಹ್ನ 2.43ಕ್ಕೆ ನಭಕ್ಕೆ ಚಿಮ್ಮಿದೆ. ಬಾಹುಬಲಿ ಎಂದು ಅಡ್ಡ ಹೆಸರಿನಿಂದ ಕರೆಯಲ್ಪಡುವ ಚಂದ್ರಯಾನ-2 ಗಗನ ನೌಕೆಯನ್ನು ಜಿಎಸ್ಎಲ್ ವಿಎಂಕೆ 3-ಎಂ1 ರಾಕೆಟ್ ನಭಕ್ಕೆ ಕಳುಹಿಸಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್ಎಲ್ವಿ ಮಾರ್ಕ್-111 ರಾಕೆಟ್ ಮೂಲಕ ಚಂದ್ರಯಾನ-2 ಅನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಕೊನೆ ಗಳಿಗೆಯಲ್ಲಿ ಮುಂದೂಡಲ್ಪಟ್ಟಿದ್ದ ಚಂದ್ರಯಾನ-2 ನೌಕೆಯನ್ನು ಇಂದು ಇಸ್ರೊ ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಇಸ್ರೋ ವಿಜ್ಞಾನಿಗಳಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.