ಪ್ರವಾಹ ಮುನ್ನೆಚ್ಚರಿಕೆ: ಕಬಿನಿ ನದಿ ಪಾತ್ರದದಿಂದ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿಗೆ 13 ಸಾವಿರ ಕ್ಯೂಸೆಕ್ ನೀರು ಪ್ರಮಾಣ ಹರಿದು ಬರುತ್ತಿದ್ದು, ಕಬಿನಿಯಿಂದ 20 ಸಾವಿರ ಕ್ಯೂಸೆಕ್ ನೀರನ್ನು ಯಾವುದೇ ಕ್ಷಣದಲ್ಲಾದರೂ ನದಿ ನೀರು ಬಿಡುವ ಸಾಧ್ಯತೆ ಇದೆ. ನದಿ ಪಾತ್ರದಲ್ಲಿರುವ ಹಾಗೂ ನದಿ ದಂಡೆಯಲ್ಲಿರುವ ಜನರ ಎಚ್ಚರ ವಹಿಸಬೇಕು.

ಆದ್ದರಿಂದ ಸಾರ್ವಜನಿಕರು ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಸುಜಾತಾ ಎನ್. ಕೋರಿದ್ದಾರೆ.

ಇನ್ನು ಕಬಿನಿ ಜಲಾಶಯದಿಂದ ಹೊರಹರಿವು ಶೀಘ್ರದಲ್ಲೇ 16000 ಕ್ಯೂಸೆಕ್‌ಗಳವರೆಗೆ ಹೆಚ್ಚಾಗಬಹುದು ಹೀಗಾಗಿ ನದಿ ಪಾತ್ರದಲ್ಲಿರುವ ಎಲ್ಲಾ ಜನರು ಮುನ್ನೆಚ್ಚರಿಕೆ ವಹಿಸುವಂತೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರು ವಿನಂತಿಸಿದ್ದಾರೆ.

Leave a Comment

Scroll to Top