ಚಾಮುಂಡಿ ಬೆಟ್ಟದಲ್ಲಿ ಮತ್ತೆ ಅಗ್ನಿಯ ನರ್ತನ: ಹೊತ್ತಿ ಉರಿಯುತ್ತಿರುವ ಅರಣ್ಯ ಪ್ರದೇಶ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದೆ.

ಚಾಮುಂಡಿ ಬೆಟ್ಟದ ಬಂಡಿಪಾಳ್ಯ ಬೆಟ್ಟದ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಅರಣ್ಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಭಂದಿ ಬೆಂಕಿನಂದಿಸುತ್ತಿದ್ದಾರೆ.

ಬೆಂಕಿಯ ಬೇಗೆಗೆ ಬಂಡಿಪಾಳ್ಯ ಬೆಟ್ಟ ಹೊತ್ತಿ ಉರಿಯುತ್ತಿದ್ದು ದಟ್ಟವಾಗಿ ಬೆಂಕಿ ಹಬ್ಬಿರುವ ಶಂಕೆ ವ್ಯಕ್ತವಾಗಿದೆ. ಕಾಡ್ಗಿಚ್ಚಿನಿಂದ ಅಪಾರ ಅರಣ್ಯ ಸಂಪತ್ತು ಆಹುತಿಯಾಗಿದೆ.

ಇನ್ನು ಒಂದು ವಾರದ ಹಿಂದೆಯೂ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಸಾವಿರಾರು ಮರಗಳು ಬೆಂಕಿಗೆ ಆಹುತಿಯಾಗಿತ್ತು.

Scroll to Top