ನಾಳೆ ಮೊದಲ ಆಷಾಢ ಶುಕ್ರವಾರ: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಮೈಸೂರು: ನಾಳೆ ಮೊದಲ ಆಷಾಢ ಶುಕ್ರವಾರ. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರತಿ ವರ್ಷ ಅದ್ದೂರಿಯಾಗಿ ನಡೆಯುತ್ತಿದ್ದ ಆಷಾಡ ಮಾಸ ಆಚರಣೆಗೆ ಈ ಬಾರಿ ಸಾರ್ವಜನಿಕ ಪ್ರವೇಶ ಇಲ್ಲ.

ಮೈಸೂರಿನಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರು ಚಾಮುಂಡಿಬೆಟ್ಟಕ್ಕೆ ಭಕ್ತರಿಗೆ ಆಷಾಢ ಶುಕ್ರವಾರದಂದು ಪ್ರವೇಶ ನಿರ್ಬಂಧಿಸಿದ್ದಾರೆ.

ಅಲ್ಲದೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನ ಮತ್ತು ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನಗಳಲ್ಲಿ ಆಷಾಢ ಶುಕ್ರವಾರಗಳಂದು ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲು ತಿಳಿಸಿದೆ.

ಕೊರೋನಾ ಸೋಂಕು ಹರಡದಂತೆ ತಡೆಯಲು ಆಷಾಢ ಶುಕ್ರವಾರ ಜೂನ್.26, ಜುಲೈ.3, ಜು.10, ಜು.17 ಜು.13ರ ವರ್ಧಂತಿ, ಜು.14ರ ಮಂಗಳವಾರ ದೇವರ ದರ್ಶನ ನಿರ್ಬಂಧಿಸಲಾಗಿದೆ. ಪ್ರತಿ ಶನಿವಾರ ಭಾನುವಾರ ಸರ್ಕಾರಿ ರಜಾದಿನಗಳಿಗೂ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವಿದೆ. ಚಾಮುಂಡಿಬೆಟ್ಟಕ್ಕೆ ಮೆಟ್ಟಿಲು ಮಾರ್ಗವೂ ಸೇರಿದಂತೆ ಎಲ್ಲ ಮಾರ್ಗಗಳಲ್ಲೂ ಗ್ರಾಮಸ್ಥರನ್ನು ಹೊರತುಪಡಿಸಿ ಸಾರ್ವಜನಿಕರು, ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ದೇವಾಲಯದ ಬಳಿ ತೂಗು ಹಾಕಲಾದ ಫಲಕದಲ್ಲಿ ಸೂಚನೆ ನೀಡಲಾಗಿದೆ.

Leave a Comment

Scroll to Top