
ಮೈಸೂರು: ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ಪ್ರವಾಸದಲ್ಲಿದ್ದು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸದಸ್ಯರೊಂದಿಗೆ ಆಗಮಿಸಿದ ಗೊಗೊಯ್ ಅವರನ್ನ ದೇವಾಲಯದ ಅಧಿಕಾರಿಗಳು ಸಾಂಪ್ರದಾಯಿಕ ರೀತಿಯಲ್ಲಿ ಬರಮಾಡಿಕೊಂಡರು.

ನಂತರ ಗೊಗೋಯಿರವರು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ದೇವಾಲಯದ ಮುಖ್ಯ ಅರ್ಚಕ ಶಶಿಶೇಖರ್ ದೀಕ್ಷಿತ್ ಉಪಸ್ಥಿತರಿದ್ದರು.
You must be logged in to post a comment.