ಮೈಸೂರು: ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.
ದಸರಾ ಮಹೋತ್ಸವದ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ಜೋಡಿಸಿರುವ ರತ್ನಖಚಿತ ಸಿಂಹಾಸನ ನೋಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಸಿಂಹಾಸನ ವೀಕ್ಷಣೆಗೆ 50 ರೂ. ದರ ನಿಗದಿಪಡಿಸಲಾಗಿದೆ. 15 ಅಡಿ ದೂರದಲ್ಲಿ ನಿಂತು ಸಿಂಹಾಸನ ವೀಕ್ಷಣೆ ಮಾಡಬಹುದಾಗಿದೆ. ಛಾಯಾ ಚಿತ್ರ, ವಿಡಿಯೋ ತೆಗೆಯುವುದನ್ನು ನಿಷೇಧಿಸಲಾಗಿದೆ.
ಪ್ರತಿವರ್ಷ ದಸರಾ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸಿಂಹಾಸನದ ಜೋಡಣೆ ನಡೆಯುತ್ತದೆ. ಈ ಬಾರಿ ಅಧಿಕ ಮಾಸದ ಕಾರಣ ಒಂದು ತಿಂಗಳು ಮುಂಚಿತವಾಗಿಯೇ (ಸೆಪ್ಟೆಂಬರ್ 18ರಂದು) ಜೋಡಣೆ ಕಾರ್ಯ ನಡೆದಿತ್ತು. ಜಿಲ್ಲಾ ಖಜಾನೆಯಲ್ಲಿದ್ದ ಈ ಸಿಂಹಾಸನವನ್ನು ದರ್ಬಾರ್ ಹಾಲ್ ನಲ್ಲಿ ಜೋಡಿಸಿಡಲಾಗಿದೆ.