ಮೈಸೂರಿನಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ!

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ನಾಗನಹಳ್ಳಿ ಕೃಷಿ ಹವಾಮಾನ ಕ್ಷೇತ್ರ ವಿಭಾಗ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಈ ವಾರದ ಮುನ್ಸೂಚನೆಯಂತೆ ಮೈಸೂರು ಜಿಲ್ಲೆಯಲ್ಲಿ 23-10- 2019 ರಿಂದ 27-10-2019 ವರೆಗೆ ಮೋಡ ಕವಿದ ವಾತಾವರಣವಿದ್ದು, ಭಾರೀ ಮಳೆ ಬರುವ ಸಾಧ್ಯತೆಯಿದೆ.

ಗರಿಷ್ಠ ಉಷ್ಣಾಂಶ 28-29ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 19ಡಿಗ್ರಿ ಸೆಲ್ಶಿಯಸ್ ವರೆಗೆ ದಾಖಲಾಗುವ ಸಾಧ್ಯತೆಯಿದೆ. ಬೆಳಗಿನ ಗಾಳಿಯ ತೇವಾಂಶ ಶೇಕಡ 86-87ರವರೆಗೆ ಮತ್ತು ಮಧ್ಯಾಹ್ನದ ತೇವಾಂಶ ಶೇಕಡ 84-92 ಗಾಳಿಯು ಗಂಟೆಗೆ ಸರಾಸರಿ 2-3 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ನಾಗನಹಳ್ಳಿ ಕೃಷಿ ಹವಾಮಾನ ಕ್ಷೇತ್ರ ವಿಭಾಗ ತಿಳಿಸಿದೆ.

Scroll to Top