
ಮೈಸೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುವುದು ಎಮದು ಸಿಎಂ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ಇಂದು ಕಬಿನಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮೈಸೂರು ದಸರಾ ಮಹೋತ್ಸವ ಈ ಭಾರಿಯೂ ನಡೆಯಲಿದೆ. ಆದರೆ ಸರಳವಾಗಿ ಯಾವ ರೀತಿ ಆಚರಿಸಬೇಕೆಂದು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಇದರ ರೂಪುರೇಷೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇವೆ. ದಸರಾ ಉನ್ನತ ಮಟ್ಟದ ಸಮಿತಿ ಸಭೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
You must be logged in to post a comment.