ಡಬಲ್ ಡೆಕ್ಕರ್

ರಾಜ್ಯ ಬಜೆಟ್: ಮೈಸೂರಿಗೆ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್ ಸೇವೆ

ಡಬಲ್ ಡೆಕ್ಕರ್

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರಿನ ಪ್ರವಾಸಿ ತಾಣಗಳನ್ನು ಇನ್ನು ಮುಂದೆ ಡಬಲ್ ಡೆಕ್ಕರ್ ಬಸ್ಸಿನಲ್ಲಿ ವೀಕ್ಷಣೆ ಮಾಡಬಹುದು. ಸಿಎಂ ಇಂದು ಮಂಡಿಸಿದ ಬಜೆಟ್ ನಲ್ಲಿ 6 ಡಬಲ್ ಡೆಕ್ಕರ್ ತೆರೆದ ಬಸ್ ಸೇವೆ ಆರಂಭಿಸಲು 5 ಕೋಟಿ ರೂ. ಅನುದಾನವನ್ನು ಘೋಷಿಸಿದ್ದಾರೆ

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್‍ಟಿಡಿಸಿ) ವತಿಯಿಂದ ಮೈಸೂರಿನಲ್ಲಿ ಲಂಡನ್ ಬಿಗ್ ಬಸ್ ಮಾದರಿಯ 6 ಡಬಲ್ ಡೆಕ್ಕರ್ ತೆರೆದ ಬಸ್ ಸೇವೆ ಆರಂಭಿಸಲು 5 ಕೋಟಿ ರೂ. ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಬಜೆಟ್ ನಲ್ಲಿ ಮೈಸೂರಿಗೆ ಸಿಕ್ಕಿದ್ದು:

  1. ನಂಜನಗೂಡು ತಾಲ್ಲೂಕಿನ ಕೆರೆ ನೀರು ತುಂಬಿಸುವ ಯೋಜನೆಗೆ 80 ಕೋಟಿ.
  2. ಭಾಷಾ ಕೌಶಲ್ಯ ಕೇಂದ್ರ.
  3. ಮೈಸೂರು ಮಹಾ ನಗರ ಪಾಲಿಕೆಗಳಿಗೆ 150 ಕೋಟಿ.
  4. ಹೆಚ್.ಡಿ.ಕೋಟೆ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ.

Leave a Comment

Scroll to Top