ಮೈಸೂರು: ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಜೀವಂತ ಹೃದಯ ರವಾನೆ ಮಾಡಲಾಗಿದೆ.
ಫೆ. 9ರಂದು ಪಿರಿಯಾಪಟ್ಟಣದ ಕೊಪ್ಪ ಬಳಿ ರಸ್ತೆ ಅಪಘಾತವಾಗಿತ್ತು. ಅಪಘಾತದ ಬಳಿಕ ಮದನ ರಾಜ್(22) ಎಂಬ ಯುವಕನ ಮಿದುಳು ನಿಷ್ಕ್ರಿಯಗೊಂಡಿತ್ತು. ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಹೃದಯ ಸೇರಿ ಅಂಗಾಂಗಗಳ ದಾನ ಮಾಡಲಾಗಿದೆ.
ಇನ್ನು ಗ್ರೀನ್ ಕಾರಿಡಾರ್ ಮೂಲಕ ಈ ಜೀವಂತ ಹೃದಯವನ್ನು ರವಾನೆ ಮಾಡಲಾಯಿತು. ಪೊಲೀಸ್ ಇಲಾಖೆ ಸಹಭಾಗಿತ್ವದಲ್ಲಿ ಭದ್ರತೆಯೊಂದಿಗೆ ಝೀರೋ ಟ್ರಾಫಿಕ್ ಮೂಲಕ ಹೃದಯ ರವಾನೆ.