ಅಭಿನಯ ಚತುರ, ಮೈಸೂರು ಮೂಲದ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ

ಮೈಸೂರು: ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಅವರು ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ‘ಲಂಚಾವತಾರ’ ನಾಟಕದ ಮೂಲಕ ಪ್ರಸಿದ್ಧರಾಗಿದ್ದ ಅವರು ನಾಟಕ ಸೇರಿದಂತೆ ಹಲವು ಚಿತ್ರಗಳಲ್ಲಿ ಅದ್ಭುತ ನಟನೆ ಮಾಡಿದ್ದಾರೆ.

ಲಂಚಾವತಾರ, ಮಕ್ಮಲ್ ಟೋಪಿ, ಕಪಿಮುಷ್ಟಿ, ದೇವದಾಸಿ, ನಡುಬೀದಿ ನಾರಾಯಣ, ಪಶ್ಚಾತ್ತಾಪ, ಭ್ರಷ್ಟಾಚಾರ, ಚಪಲಾವತಾರ, ಡಬ್ಬಲ್ ತಾಳಿ, ಲಾಟರಿ ಸರ್ಕಾರ ಹಾಗೂ ಸನ್ಯಾಸಿ ಸಂಸಾರ ಸೇರಿ ಹಲವು ನಾಟಕದಲ್ಲಿ ಅಭಿನಯಿಸಿದ್ದಾರೆ.

ಕಲೆಯಲ್ಲಿ ಸಲ್ಲಿಸಿದ ಸೇವೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ನಾಟಕ ಅಕಾಡೆಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಹಾಗೂ ನವರತ್ನ ರಾಂ ಪ್ರಶಸ್ತಿಗೆ ಹಿರಣ್ಣಯ್ಯ ಅವರು ಭಾಜನರಾಗಿದ್ದಾರೆ.

Leave a Comment

Scroll to Top