ಮೈಸೂರಿನಲ್ಲಿ ಆಟದ ಮೈದಾನ – ಉದ್ಯಾನವನ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ

ಮೈಸೂರು: ಮೈಸೂರು ನಗರದಲ್ಲಿ ಕೊವೀಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ಭಂದಿಸಿದ್ದ ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ಯಾನವನಗಳು ಹಾಗೂ ಆಟದ ಮೈದಾನಗಳನ್ನು ಎಂದಿನಂತೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಸಾರ್ವಜನಿಕರು ಹಾಗೂ ನಾಗರಿಕರಿಗೆ ವಾಯು ವಿಹಾರಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಈ ನಿರ್ಬಂಧವನ್ನು ತೆರವುಗೊಳಿಸಿ ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಆದೇಶಿಸಿದ್ದಾರೆ.

ನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ಯಾನವನಗಳು ಹಾಗೂ ಆಟದ ಮೈದಾನಗಳಿಗೆ ಎಂದಿನಂತೆ ಸಾರ್ವಜನಿಕರು ಹಾಗೂ ನಾಗರಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಉಪಯೋಗಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Leave a Comment

Scroll to Top