ಮೈಸೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಯೋಜಿಸಿರುವ ಕಾರ್ಯಕ್ರಮಕ್ಕೆ ಮೈಸೂರಿನ ವಿದ್ಯಾರ್ಥಿಯೊಬ್ಬ ಯುವ ವಿಜ್ಞಾನಿಯಾಗಿ ಆಯ್ಕೆಯಾಗಿದ್ದಾನೆ.
ದೇಶದಲ್ಲೇ ಮೊದಲ ಬಾರಿಗೆ ಇಸ್ರೋ ಆಯೋಜಿಸಿರುವ ‘ಯುವಿಕಾ'(ಯುವ ವಿಜ್ಞಾನಿ) ಕಾರ್ಯಕ್ರಮಕ್ಕೆ ಜವಾಹಾರ್ ಲಾಲ್ ನವೋದಯ ವಿದ್ಯಾಲಯದ ವಿದ್ಯಾರ್ಥಿ ಎಂ.ಭರತೇಶ್ವರ್ ಆಯ್ಕೆ ಆಗಿದ್ದಾನೆ.
ದೇಶದ ವಿವಿಧೆಡೆಯಿಂದ ಸರಿ ಸುಮಾರು 108 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕದಿಂದ ಮೂವರು ಆಯ್ಕೆಯಾಗಿದ್ದಾರೆ.
ಹೈಸ್ಕೂಲ್ ನಲ್ಲಿ ಮಕ್ಕಳ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಯ ಆಧಾರದ ಮೇಲೆ ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ಹಾಗೂ ತಂತ್ರಜ್ಞಾನಗಳ ಬಗ್ಗೆ ಜ್ಞಾನ ನೀಡುವುದು. ಅಲ್ಲದೆ ಈ ವಿಷಯದ ಬಗ್ಗೆ ಹಚ್ಚಿನ ಆಸಕ್ತಿ ಹುಟ್ಟಿಸುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.