ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗಿದ್ದು ಗಜಪಡೆಗಳು ಮೈಸೂರಿನತ್ತ ಪಯಣ ಬೆಳಸಿವೆ.
ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ನಡೆಯಲಿದೆ. ಹೀಗಾಗಿ ವೀರನಹೊಸಳ್ಳಿಯಲ್ಲಿ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಐದು ಆನೆಗಳ ತಂಡವನ್ನು ವೀರನಹೊಸಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕರೆತರುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೇವಲ ಅಧಿಕಾರಿಗಳಷ್ಟೇ ಭಾಗಿಯಾಗಿದ್ದರು. ಜನಪ್ರತಿನಿಧಿಗಳು ಭಾಗಿಯಾಗಿಲ್ಲ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಪಂ ಸಿಇಒ ಡಿ.ಭಾರತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಡಿಸಿಎಫ್ ಅಲೆಗ್ಸಾಂಡರ್ ಮತ್ತಿತರರು ಉಪಸ್ಥಿತರಿದ್ದರು. ಈ ಬಾರಿಯ ದಸರಾ ಮಹೋತ್ಸವದಲ್ಲಿ ಕೇವಲ ಐದು ಆನೆಗಳು ಪಾಲ್ಗೊಳ್ಳುತ್ತಿದ್ದು ಅಭಿಮನ್ಯು, ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ಮೈಸೂರಿನತ್ತ ಹೊರಟಿವೆ.