ಮೈಸೂರು: ದಸರಾ ಮಹೋತ್ಸವ ಪ್ರಯುಕ್ತ ಜನಪ್ರಿಯ ಆಹಾರ ಮೇಳವನ್ನು ಸೆ.29ರಿಂದ ಅ.16ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಮತ್ತು ಲಲಿತ್ ಮಹಲ್ ಹೋಟೆಲ್ ಪಕ್ಕದ ಮುಡಾ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.
ಆಹಾರ ಮೇಳದಲ್ಲಿ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ, ಟಿಬೇಟಿಯನ್, ಕಾಶ್ಮೀರಿ, ಪಂಜಾಬಿ, ರಾಜಸ್ಥಾನಿ, ಈಶಾನ್ಯ ಭಾರತ, ಆಂಧ್ರ, ಕೇರಳ, ತಮಿಳುನಾಡು, ಮರಾಠಿ ಶೈಲಿಯಲ್ಲಿನ ಸಸ್ಯಾಹಾರಿ ಮತ್ತು ಶಾಖಾಹಾರಿ ಆಹಾರ ಪದ್ಧತಿ ಇರಲಿದ್ದು ಚೈನೀಸ್, ಇಟಾಲಿಯನ್, ಫ್ರೆಂಚ್, ಆಫ್ರಿಕನ್, ಆಹಾರ ಪದ್ಧತಿಯಡಿಯಲ್ಲಿ ಆಹಾರ ತಯಾರಿಸುವ ಅಡುಗೆಗಳು, ಸಿರಿಧಾನ್ಯ, ಸಹಜ ಹಾಗೂ ಸಾವಯವ ಧಾನ್ಯಗಳಲ್ಲಿ ಅಡುಗೆ ಮಾಡುವವರು ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಸಿದ್ಧಾರ್ಥ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕ ಪಿ.ಶಿವಣ್ಣ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊ.ಸಂ. 9448439392 ಅಥವಾ 0821-2422107ನ್ನು ಸಂಪರ್ಕಿಸಬಹುದು.