4 ದಿನ ದೇವರಾಜ ಮಾರುಕಟ್ಟೆಯಲ್ಲಿ ಹೂವು & ಸಗಟು, ಚಿಲ್ಲರೆ ವ್ಯಾಪಾರ ಬಂದ್

ಮೈಸೂರು: ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಮತ್ತು ಜನಸಂದಣಿ ನಿಯಂತ್ರಣಕ್ಕಾಗಿ ಗೌರಿ ಮತ್ತು ಗಣೇಶ ಹಬ್ಬದ ಪ್ರಯುಕ್ತ 19/8/2020ರಿಂದ 22/08/2020ರವರೆಗೆ ನಾಲ್ಕು ದಿನಗಳ ಕಾಲ ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಯನ್ನು ಮುಚ್ಚಲು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಆದೇಶಿಸಿದ್ದಾರೆ.

ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರಸ್ಥರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಈ ನಾಲ್ಕು ದಿನಗಳು ರೈಲ್ವೆ ನಿಲ್ದಾಣದ ಬಳಿ ಇರುವ ಜೀವರಾಯನ ಕಟ್ಟೆ ಮೈದಾನದಲ್ಲಿ ಹೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

Scroll to Top