ಮೈಸೂರಿನಲ್ಲಿ ಮೊದಲ ಕೊರೋನಾ ವೈರಸ್ ಪತ್ತೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊದಲ ಕೊರೋನಾ ವೈರಸ್ ಪತ್ತೆಯಾಗಿದೆ. ದುಬೈನಿಂದ ಆಗಮಿಸಿದ್ದ 35 ವರ್ಷದ ವ್ಯಕ್ತಿಗೆ ಸೋಂಕು ತಗುಳಿರುವುದು ದೃಢಪಟ್ಟಿದೆ.

ದುಬೈನಿಂದ ಗೋವಾ ಮೂಲಕ ಬೆಂಗಳೂರಿಗೆ ಆಗಮಿಸಿದ್ದ ಸೊಂಕಿತ ನಂತರದಲ್ಲಿ ಮೈಸೂರಿಗೆ ಆಗಮಿಸಿದ್ದ ಎಂದು ಮಾಹಿತಿ ತಿಳಿದುಬಂದಿದೆ.

ಮೈಸೂರಿನ‌ ಕೆ.ಆರ್. ಆಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Scroll to Top