ಮೈಸೂರು: ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಕೊರೊನಾ ಸೋಂಕಿನಿಂದ ಗುಣಮುಖರಾದ ಹಿನ್ನಲೆ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಿಷ್ಯಂತ್ ಅವರಿಗೆ ಆ.18 ರಂದು ಸೋಂಕು ತಗುಲಿರುವುದು ದೃಢಪಟ್ಟಿತ್ತು. ಎಸ್‌ಪಿ ಕಚೇರಿಯ ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ರಿಷ್ಯಂತ್ ಅವರು ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸೋಂಕು ದೃಢಪಟ್ಟ ಬಳಿಕ ರಿಷ್ಯಂತ್ ಅವರು ನಗರದ ಗೋಪಾಲಗೌಡ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಯಾಗಿ ಹೊರಬರುತ್ತಿದ್ದ ವೇಳೆ ರಿಷ್ಯಂತ್ ಅವರ ಮೇಲೆ ಹೂವಿನ ಮಳೆ ಸುರಿಸಿ ಸ್ವಾಗತಿಸಲಾಯಿತು.