ಮೈಸೂರು: ಈ ವರ್ಷದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ ಪ್ರಯುಕ್ತ ಮೈಸೂರಿನ ಕೆ.ಆರ್ ವೃತ್ತದಲ್ಲಿರುವ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರು ಹಾಗೂ ರಾಜ್ಯಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ. ಅವರಿಗೆ ಗೌರವ ಸಲ್ಲಿಸುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಪ್ರತಿ ವರ್ಷ ಅವರ ಹೆಸರಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ನಾಡಿನ 10 ಗಣ್ಯರಿಗೆ ಜಿಲ್ಲಾಡಳಿತ ವತಿಯಿಂದ ಗೌರವಿಸಲಾಗುವುದು ಎಂದು ತಿಳಿಸಿದರು.