ಕೊರೊನಾ ಭೀತಿ: ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ ಬಂದ್

ಮೈಸೂರು: ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನವನ್ನು ಬಂದ್ ಮಾಡಲಾಗಿದೆ.

ಕೊರೊನಾದಿಂದಾಗಿ ನಂಜನಗೂಡು ದೇವಾಲಯವನ್ನು ಬಂದ್ ಆಗಿದೆ. ದೇವಾಲಯಕ್ಕೆ ಇಂದಿನಿಂದ ಭಕ್ತಾದಿಗಳ ಪ್ರವೇಶ ನಿಷೇಧವಿದ್ದು ದೇವಾಲಯದ ಮುಂಬಾಗಿಲು ಮುಚ್ಚಲಾಗಿದೆ. ಮಾರ್ಚ್ 31ರವರೆಗೆ ದೇವಾಲಯ ಭಕ್ತರು ಹಾಗೂ ಸಾರ್ವಜನಿಕರ ಪ್ರವೇಶ ಇಲ್ಲ ಎಂದು ನೋಟಿಸ್ ಆಂಟಿಸಲಾಗಿದೆ.

ದೇವಾಲಯದಲ್ಲಿ ಎಂದಿನಂತೆ ಪೂಜಾ ಕೈಂಕರ್ಯ ನಡೆದಿವೆ.

Scroll to Top