ಮೈಸೂರು: ಇಂದು ಬೆಳ್ಳಂಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಜೆಸಿಬಿ ಘರ್ಜಿಸಿವೆ. ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಅಂಗಡಿ ಮಳಿಗೆಗಳನ್ನು ತೆರವು ಮಾಡಲಾಗಿದೆ.
ಬೆಟ್ಟದಲ್ಲಿ ಕಂದಾಯ ಇಲಾಖೆ, ಗ್ರಾಮ ಠಾಣಾ ಮತ್ತು ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 100ಕ್ಕೂ ಅಧಿಕ ಅಂಗಡಿ ಮಳಿಗೆಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.
ದೇವಸ್ಥಾನ ಮುಂಭಾಗ ಸಾರ್ವಜನಿಕ ರಸ್ತೆ, ಸರ್ಕಾರಿ ಜಾಗದಲ್ಲಿದ್ದ ಅನಧಿಕೃತ ಅಂಗಡಿಗಳ ತೆರವುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಸೂಚನೆ ಮೇರೆಗೆ ತೆರವು ಕಾರ್ಯಾಚರಣೆ ಮಾಡಲಾಗಿದೆ.
ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.