
ಮೈಸೂರು: ನಗರದ ಕುಕ್ಕರಹಳ್ಳಿ ಕೆರೆಯಲ್ಲಿ ಮಂಗಳವಾರ ಮತ್ತೊಂದು ಸ್ಪಾಟ್ ಬಿಲ್ಡ್ ಪೆಲಿಕಾನ್ ಪಕ್ಷಿ ಮೃತಪಟ್ಟಿದ್ದು, ಮೂರು ವಾರಗಳ ನಂತರದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.
ನಿನ್ನೆ ಸಂಜೆ ಕುಕ್ಕರಳ್ಳಿ ಕೆರೆ ನೀರಲ್ಲಿ ಸ್ಪಾಟ್ ಬಿಲ್ಡ್ ಪೆಲಿಕಾನ್ ಪಕ್ಷಿಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ವಾಯುವಿಹಾರಿಗಳು ಈ ವಿಚಾರವನ್ನು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮೃತ ಪಕ್ಷಿಯ ಕಳೆಬರವನ್ನು ತೆಗೆದುಕೊಂಡು ಬೆಂಗಳೂರಿನ ಅನಿಮಲ್ ಹೆಲ್ತ್ ಆ್ಯಂಡ್ ವೆಟರ್ನರಿ ಬಯೋಲಾಜಿಕಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಒಂದೆರಡು ದಿನಗಳಲ್ಲಿ ವರದಿ ಬರುವ ನಿರೀಕ್ಷೆ ಇದ್ದು, ಈ ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಡಿಸಿಎಫ್ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಹಿಂದೆ ಕೆರೆಯಲ್ಲಿ ಮೃತಪಟ್ಟ ಎರಡು ಸ್ಪಾಟ್ ಬಿಲ್ಡ್ ಪೆಲಿಕಾನ್ ಪಕ್ಷಿಗಳ ಮಾದರಿಯನ್ನು ಬೆಂಗಳೂರಿನ ಅನಿಮಲ್ ಹೆಲ್ತ್ ಅಂಡ್ ವೆಟರ್ನರಿ ಬಯಾಲಜಿಕಲ್ಸ್ ಎಂಬ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇವುಗಳಿಗೆ ಸಂಬಂಧಿಸಿದ ವರದಿ ಮುಂದಿನ ಎರಡು ದಿನಗಳಲ್ಲಿ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
You must be logged in to post a comment.