
ಮೈಸೂರು: ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ 100ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಬರುವ ಸೋಮವಾರ ಇದೇ 19ರಂದು ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ವಿಶ್ವವಿದ್ಯಾಲಯದ 100ನೇ ವಾರ್ಷಿಕ ಘಟಿಕೋತ್ಸವವನ್ನು ಅ.19 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಏರ್ಪಡಿಸಲಾಗಿದೆ. ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ವರ್ಚ್ಯುಯಲ್ ಮೂಲಕ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಸಮಾರಂಭ ನಡೆಸಲು ಮೈಸೂರು ವಿವಿ ಸಿದ್ಧತೆ ನಡೆಸಿದೆ. ಕಾರ್ಯಕ್ರಮದಲ್ಲಿ 600ಕ್ಕೂ ಹೆಚ್ಚು ಮಂದಿಗೆ ಪಿಹೆಚ್ಡಿ ಪ್ರಧಾನ ಮಾಡಲಾಗುತ್ತದೆ.