ಸಚಿನ್, ಗಂಗೂಲಿ, ಕೊಹ್ಲಿ ಸೇರಿದಂತೆ 40 ಕ್ರೀಡಾಪಟುಗಳೊಂದಿಗೆ ಮೋದಿ ಮಹತ್ವದ ಸಭೆ..!

ನವದೆಹಲಿ: ಭಾರತ ದಿಗ್ಗಜ ಹಾಗೂ ಪ್ರಮುಖ ಕ್ರೀಡಾಪಟುಗಳ ಜೊತೆ ಪ್ರಧಾನಿ ಮೋದಿ ಅವರು ಇಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಸುಮಾರು 40 ಜನ ಕ್ರೀಡಾಪುಟಗಳ ಜೊತೆ ಕೋರೊನಾ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡ ಮೋದಿ, ಕೋವಿಡ್​-19 ವಿರುದ್ಧದ ಹೋರಾಟದಲ್ಲಿ ನೀವೆಲ್ಲರೂ ಕೈಜೋಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಕ್ರೀಡಾಪಟುಗಳು ವಾಸವಾಗಿರುವ ನಗರಗಳಲ್ಲಿ ಕೊರೊನಾ ವೈರಸ್​ ಪರಿಸ್ಥಿತಿ ಲಾಕ್​​ಡೌನ್​ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದೆ ಎಂಬ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ತಮ್ಮ ತಮ್ಮ ಜಾಲತಾಣಗಳಲ್ಲಿ ಸಕ್ರಿಯವಾಗಿ ಕೊರೊನಾ ವೈರಸ್ ಬಗ್ಗೆ ಜನರಿಗೆ ಜಾಗೃತಿ ವಿಡಿಯೋ ಮೂಲಕ ಮಾಹಿತಿ ತಲುಪಿಸುವಂತೆ ಮನವಿ ಮಾಡಿದ್ದಾರೆ.

ಈ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಕೊಹ್ಲಿ, ಸಚಿನ್ ಮತ್ತು ಗಂಗೂಲಿಯವರ ಜೊತೆ, ಓಟಾಗಾರ್ತಿ ಪಿಟಿ ಉಷಾ, ಬ್ಯಾಡ್ಮಿಂಟನ್ ಆಟಗಾರ ಪುಲ್ಲೇಲಾ ಗೋಪಿಚಂದ್, ಚೆಸ್ ಆಟಗಾರ ವಿಶ್ವನಾಥನ್ ಆನಂದ್, ರನ್ನರ್ ಹಿಮಾ ದಾಸ್, ಕುಸ್ತಿಪಟು ಭಜರಂಗ್ ಪುನಿಯಾ, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು, ಕ್ರಿಕೆಟಿಗರಾದ ರೋಹಿತ್ ಶರ್ಮಾ, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್ ಮತ್ತು ಚೇತೇಶ್ವರ ಪೂಜಾರ ಇತರ ಪ್ರಮುಖ ಕ್ರೀಡಾಪಟುಗಳು ಇದ್ದರು.

Scroll to Top