
ಮೈಸೂರು: ಕೊರೋನಾ ಲಾಕ್ಡೌನ್ ಹಿನ್ನಲೆ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ(ಇಂಗ್ಲೀಷ್) ಮೈಸೂರಿನಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮದೊಂದಿಗೆ ಇಂದು ಆರಂಭವಾಯಿತು.
ಪರೀಕ್ಷೆ ಬರೆಯಲು ಬಂದ ಪ್ರತಿಯೊಬ್ಬ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಿ ಕೈಗೆ ಸ್ಯಾನಿಟೈಸರ್ ಹಾಕಿ ಪರೀಕ್ಷಾ ಹಾಲ್ ಒಳಗಡೆ ಬಿಡಲಾಯಿತು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿತ್ತು. ಪರೀಕ್ಷೆಯು 10-15ರಿಂದ ಆರಂಭವಾಗಿದ್ದು ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಇನ್ನು ಜಿಲ್ಲೆಯ 50 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 31,569 ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಹೊರ ಜಿಲ್ಲೆಯ 436 ವಿದ್ಯಾರ್ಥಿಗಳು ಇಲ್ಲೇ ಪರೀಕ್ಷೆ ಬರೆಯುತ್ತಿದ್ದಾರೆ. ಮೈಸೂರು ನಗರದ 26 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
View this post on InstagramA post shared by Mysuru Online (@mysuruonline) on
You must be logged in to post a comment.