ನವದೆಹಲಿ: 2019 ರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಚಾಲನೆ ನೀಡಿದರು.
ನಾಳೆ ದೇಶಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೋಷಕರು ತಮ್ಮ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಕ್ಕದ ಲಸಿಕಾ ಕೇಂದ್ರಕ್ಕೆ ಕರೆದೊಯ್ದು ತಪ್ಪದೇ ಲಸಿಕೆ ಹಾಕಿಸಬೇಕು.
ಪೋಲಿಯೋ ನಿರ್ಮೂಲನೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಾರಿ ಒಂದು ಸುತ್ತು ಮಾತ್ರ ಪೊಲೀಯೋ ಲಸಿಕೆ ಹಾಕಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಭಾರತವನ್ನು ಪೋಲಿಯೋ ಮುಕ್ತವನ್ನಾಗಿಸಲು 1994 ರಲ್ಲಿ ಪ್ರಾರಂಭವಾದ ಈ ಪಲ್ಸ್ ಪೋಲಿಯೋ ಯೋಜನೆಯಿಂದಾಗಿ ದೇಶದಲ್ಲಿ ಸಾಕಷ್ಟು ಪ್ರಗತಿ ಕಂಡು ಬಂದಿದೆ. ಕಳೆದ 7 ವರ್ಷಗಳಿಂದ ಇಲ್ಲಿಯವರೆಗೆ ಯಾವುದೇ ಪೋಲೀಯೋ ಪ್ರಕರಣಗಳು ವರದಿಯಾಗಿಲ್ಲ ಎನ್ನಲಾಗಿದ್ದು, ಭಾರತ ಸಹ ಪೊಲೀಯೋ ಮುಕ್ತ ರಾಷ್ಟ್ರವಾಗಿದೆ.