ಕೆಆರ್‌ಎಸ್‌ ಡ್ಯಾಂನಿಂದ ನೀರು ಹರಿಸುವ ಸಾಧ್ಯತೆ: ಕಾವೇರಿ ನದಿ ತೀರದ ಜನರಿಗೆ ಎಚ್ಚರಿಕೆ

ಮೈಸೂರು: ಕೃಷ್ಣರಾಜಸಾಗರ ಜಲಾಶಯಕ್ಕೆ(ಕೆಆರ್‌ಎಸ್‌) ಒಳಹರಿವು ಪ್ರಮಾಣ ಹೆಚ್ಚಾದ ಕಾರಣ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ಕಾವೇರಿ ನದಿ ತೀರದ ಜನರಿಗೆ ನೀರಾವರಿ ನಿಗಮ ಎಚ್ಚರಿಕೆ ನಿಡಿದೆ.

ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್‌ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ನದಿ ತೀರದ ಎಚ್ಚರಿಕೆ ನೀಡಿದೆ.

ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಮತ್ತು ಜಾನುವಾರುಗಳ ರಕ್ಷಣೆಗೆ ಎಚ್ಚರ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕೋರಲಾಗಿದೆ ಎಂದು ನಿಗಮದ ಪ್ರಕಟಣೆಯಲ್ಲಿ ತಿಳಿಸಿದೆ.

Scroll to Top