ಮೈಸೂರು: ಇಂದು ರಾತ್ರಿ ಚಾಮುಂಡಿ ಬೆಟ್ಟದ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ ಬಾಲಕೃಷ್ಣ ಆದೇಶ ಹೊರಡಿಸಿದ್ದಾರೆ. ಇಂದು ರಾತ್ರಿ 9 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆವರೆಗೆ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಲ್ಲಿನ ನಿವಾಸಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಚಾಮುಂಡಿ ಬೆಟ್ಟ ವ್ಯೂ ಪಾಯಿಂಟ್ ನಲ್ಲಿ ಮೋಜು ಮಸ್ತಿಗೆ ತಾಣವಾಗುವ ಸಾಧ್ಯತೆ ಮತ್ತು ಮದ್ಯಪಾನ ಮಾಡಿ ಸಂಚಾರಕ್ಕೆ ಕಿರಿಕಿರಿ ಉಂಟುಮಾಡುವ ಈ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಹೊಸ ವರ್ಷಾಚರಣೆ ಸಂಬಂಧ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ಚಾಮುಂಡಿ ಬೆಟ್ಟಕ್ಕೆ ತೆರಳುವ ರಸ್ತೆಗಳಾದ ಉತ್ತನಹಳ್ಳಿ ಗೇಟ್, ದೈವೀವನ ಗೇಟ್, ಲಲಿತಮಹಲ್ ಗೇಟ್ ಹಾಗೂ ಚಾಮುಂಡಿಬೆಟ್ಟದ ಪಾದದ ಬಳಿ ಇರುವ ಗೇಟ್‍ಗಳಲ್ಲಿ 31-12-2019 ರ ಸಂಜೆ 7 ಗಂಟೆಯಿಂದ 01-01-2020 ಬೆಳಿಗ್ಗೆ 6 ಗಂಟೆಯವರೆಗೂ ಹಾಗೂ ಚಾಮುಂಡಿಬೆಟ್ಟಕ್ಕೆ ಪ್ರಮುಖ ದಾರಿ ಕಲ್ಪಿಸುವ ತಾವರೆಕಟ್ಟೆ ಗೇಟ್‍ನಲ್ಲಿ 31-12-2019 ರ ರಾತ್ರಿ 9 ಗಂಟೆಯಿಂದ 01-01-2020 ಬೆಳಿಗ್ಗೆ 6 ಗಂಟೆಯವರೆಗೆ ಚಾಮುಂಡಿಬೆಟ್ಟದ ನಿವಾಸಿಗಳನ್ನು ಹೊರತು ಪಡಿಸಿ ಚಾಮುಂಡಿಬೆಟ್ಟಕ್ಕೆ ತೆರಳುವ ಎಲ್ಲಾ ಸಾರ್ವಜನಿಕ ವಾಹನಗಳ ಪ್ರವೇಶವನ್ನು ನಿರ್ಬಂಧಿಸಿ ಮೈಸೂರು ನಗರದ ಪೊಲೀಸ್ ಆಯುಕ್ತರಾದ ಕೆ.ಟಿ. ಬಾಲಕೃಷ್ಣ ಅಧಿಸೂಚನೆ ಹೊರಡಿಸಿದ್ದಾರೆ.