ಮೈಸೂರು: ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ವರ್ಗಾವಣೆ ಬಳಿಕ ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಆ.29 ರಂದು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ಕೇವಲ ಒಂದು ತಿಂಗಳ ಒಳಗೆ ಶರತ್ ರನ್ನು ಎತ್ತಂಗಡಿ ಮಾಡಲಾಗಿದೆ
2009 ಬ್ಯಾಚಿನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಮತ್ತೊಮ್ಮೆ ವರ್ಗಾವಣೆ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಕರ್ನಾಟಕ ಸರ್ಕಾರವು ಸೋಮವಾರ ಸಂಜೆ ಆದೇಶ ಹೊರಡಿಸಿದೆ.