ಮೈಸೂರು: ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ರೋಹಿಣಿ ಸಿಂಧೂರಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ನೂತನ ಜಿಲ್ಲಾಧಿಕಾರಿಯನ್ನ ಕಛೇರಿಯ ಸಿಬ್ಬಂದಿ ಹೂಗುಚ್ಚ ನೀಡಿ ಸ್ವಾಗತಿಸಿದರು.
ಅಧಿಕಾರ ಸ್ವೀಕಾರಕ್ಕು ಮುನ್ನ ರೋಹಿಣಿ ಸಿಂಧೂರಿ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.