ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಬಿ.ಶರತ್ ಅಧಿಕಾರ ಸ್ವೀಕಾರ

ಮೈಸೂರು: ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬಿ.ಶರತ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಿ.ಶರತ್ ಅವರು ನಿನ್ನೆ ರಾತ್ರಿಯೇ ಮೈಸೂರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.

ಶರತ್ ಅವರು ಈ ಹಿಂದೆ ಕಲಬುರ್ಗಿಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರು 2011ರ ಬ್ಯಾಚ್’ನ ಐಎಎಸ್ ಅಧಿಕಾರಿಯಾಗಿದ್ದಾರೆ. ಶರತ್ ಚಿತ್ರದುರ್ಗ ಜಿಲ್ಲೆಯವರಾಗಿದ್ದು ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಬೀದರ್ ಮತ್ತು ಮಂಡ್ಯ ಜಿಲ್ಲಾ ಪಂಚಾಯತ್ ಗಳಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Scroll to Top