ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ

ಶಿವಕುಮಾರ ಸ್ವಾಮೀಜಿಗಳ ಸ್ಥಿತಿ ಗಂಭೀರ

ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ಶ್ರೀಗಳ ಆರೈಕೆ ಮಾಡುತ್ತಿರುವ ಡಾ. ಪರಮೇಶ್​ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಅವರ ಶ್ವಾಸಕೋಶ, ರಕ್ತದೊತ್ತಡ, ಉಸಿರಾಟದಲ್ಲಿ ತೊಂದರೆಗಳಾಗುತ್ತಿವೆ. ಪರಿಸ್ಥಿತಿ ಈಗಲೂ ಹಾಗೆಯೇ ಮುಂದುವರಿದಿದೆ. ಸಮಸ್ಯೆ ಸರಿಪಡಿಸಲು ನಾವೂ ಕೂಡ ಶತ ಪ್ರಯತ್ನ ನಡೆಸುತ್ತಿದ್ದೇವೆ. ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ ಎಂದು ಹೇಳಿದರು.

ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ. ಸ್ವಲ್ಪ ಗಂಭೀರ ಸ್ಥಿತಿಯಲ್ಲೇ ಅವರು ಇದ್ದಾರೆ. ಹೀಗಾಗಿ ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ಕೊಡುತ್ತಲೇ ಇದ್ದೇವೆ ಎಂದು ತಿಳಿಸಿದರು.

ಇನ್ನು ಮಠದ ಸುತ್ತಮುತ್ತ ಪೊಲೀಸ್ ಭಿಗಿಭದ್ರೆಯನ್ನು ಹೆಚ್ಚಿಸಲಾಗಿದೆ. ಅಲ್ಲದೆ ಭಾರಿ ಸಂಖ್ಯೆಯಲ್ಲಿ ಬ್ಯಾರಿಕೇಡ್ ಗಳನ್ನೂ ಅಳವಡಿಸಲಾಗಿದೆ. ಮತ್ತು ಬೇರೆ ಜಿಲ್ಲೆಗಳಿಂದ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇದರಿಂದಾಗಿ ಭಕ್ತರಲ್ಲಿ ಆತಂಕ ಮೂಡುವಂತೆ ಮಾಡಿದೆ. ಇದಲ್ಲದೆ ತುಮಕೂರು ಮಾರ್ಗಗಳನ್ನು ಬದಲಾವಣೆ ಮಾಡಿದ್ದು, ವಾಹನಗಳಿಗೆ ನಿರ್ಬಂಧ ಹೇರಲಾಗಿದೆ.

Leave a Comment

Scroll to Top