ಮೈಸೂರು ಮೃಗಾಲಯಕ್ಕೆ 20 ಲಕ್ಷ ರೂ. ದೇಣಿಗೆ ನೀಡಿದ ಸುಧಾ ಮೂರ್ತಿ

ಮೈಸೂರು: ಇನ್ಫೋಸಿಸ್‌ ಪ್ರತಿಷ್ಠಾನದ ಸುಧಾ ಮೂರ್ತಿಯವರು ಮೈಸೂರು ಮೃಗಾಲಯಕ್ಕೆ ಮತ್ತೊಮ್ಮೆ ದೇಣಿಗೆ ನೀಡಿದ್ದಾರೆ. ಕೋವಿಡ್ -19 ರ ಕಷ್ಟದ ಸಮಯದಲ್ಲಿ ಸುಧಾ ಮೂರ್ತಿಯವರ ಈ ರೀತಿಯ ಉದಾರವಾದ ದೇಣಿಗೆ ಅತ್ಯಮೂಲ್ಯ ಮತ್ತು ಇತರರಿಗೆ ಸ್ಫೂರ್ತಿಯಾಗಿದೆ.

ಜಯಚಾಮರಾಜೇಂದ್ರ ಮೃಗಾಲಯದ ಪ್ರಾಣಿಗಳ ಆರೋಗ್ಯ ಹಾಗೂ ನಿರ್ವಹಣೆಗೆ ಇನ್ಫೋಸಿಸ್ ಫೌಂಡೇಶನ್​ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರು 20 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕೊರೊನಾ ಸಂಕಷ್ಟ ಎದುರಿಸುತ್ತಿರುವ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಈವೆರೆಗೆ ₹40 ಲಕ್ಷ ನೀಡಿದ್ದಾರೆ.

ಈ ಹಿಂದೆ ಕೊರೊನಾ ಲಾಕ್​ಡೌನ್​ ಹಿನ್ನೆಲೆ ಪ್ರವಾಸಿಗರು ಬರದೇ ಮೃಗಾಲಯದ ನಿರ್ವಹಣೆಗೆ ಹಣದ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಸಹಾಯ ಮಾಡುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಇನ್ಫೋಸಿಸ್ ಸಂಸ್ಥೆಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಸ್ಪಂದಿಸಿರುವ ಇನ್ಫೋಸಿಸ್ ಸಂಸ್ಥೆ, ಮೃಗಾಲಯಕ್ಕೆ 20 ಲಕ್ಷ ದೇಣಿಗೆ ನೀಡಿತ್ತು.

ಸುಧಾಮೂರ್ತಿ ಅವರಿಗೆ ಮೃಗಾಲಯದ ನಿರ್ದೇಶಕ ಅಜಿತ್ ಕುಲಕರ್ಣಿ ಕೃತಜ್ಞತೆ ಸಲ್ಲಿಸಿದ್ದಾರೆ.

Scroll to Top