ಮೈಸೂರು: ಅಯೋಧ್ಯೆ ತೀರ್ಪು ಹಿನ್ನೆಲೆ, ಇಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ.
ಹಲವು ದಶಕಗಳಿಂದ ಕೋರ್ಟ್ನಲ್ಲಿ ಉಳಿದಿದ್ದ ಅಯೋಧ್ಯೆ ಭೂ ವಿವಾದದ ಕುರಿತಂತೆ ಇಂದು ತೀರ್ಪು ಹೊರಬೀಳಲಿದ್ದು ಈಗಾಗಲೇ ಉತ್ತರ ಪ್ರದೇಶದಲ್ಲಿ ಎಲ್ಲಾ ಶಾಲಾ ಕಾಲೇಜು ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಇದೀಗ ಕರ್ನಾಟಕ ಸರ್ಕಾರವೂ ಕೂಡ ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಪದವಿ ಪರೀಕ್ಷೆ ಮುಂದೂಡಿಕೆ!
ರಾಜ್ಯ ಸರ್ಕಾರ ರಜೆ ಘೋಷಿಸಿದ ಹಿನ್ನೆಲೆ ಇಂದು (ನ.9) ನಿಗದಿಯಾಗಿದ್ದ ಮೈಸೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕ ತಿಳಿಸಲಾಗುವುದೆಂದು ಕುಲಪತಿ ಪ್ರೊ. ಹೇಮಂತ್ ಕುಮಾರ್ ಅವರು ತಿಳಿಸಿದ್ದಾರೆ.