
ಮೈಸೂರು: ಮೈಸೂರಿನ ಪ್ರವಾಸಿ ತಾಣಗಳ ಮೇಲೆ ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ.ಸೋಮಶೇಖರ್ ತಿಳಿಸಿದ್ದಾರೆ.
ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೋಮಶೇಖರ್ ಅವರು ನಿರ್ಬಂಧ ತೆರವು ಮಾಡಿರುವ ಕುರಿತು ಘೋಷಣೆ ಮಾಡಿದರು. ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆದೇಶದ ಮೇರೆಗೆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದರು.
ಚಾಮುಂಡಿಬೆಟ್ಟ, ಮೃಗಾಲಯ, ಅರಮನೆ, KRS, ನಂಜನಗೂಡು, ಕೆಆರ್ ಎಸ್, ತಲಕಾಡು ಸೇರಿದಂತೆ ವಿವಿಧ ಸ್ಥಳಗಳ ವೀಕ್ಷಣೆಗೆ ಪ್ರವಾಸಿಗರನ್ನು ದಸರಾ ಮುಗಿಯುವವರೆಗೆ ಪ್ರವೇಶ ನಿರ್ಬಂಧ ಹೇರಿರುವ ಕ್ರಮವನ್ನು ಮುಖ್ಯಮಂತ್ರಿಗಳು ಹಿಂಪಡೆಯುವಂತೆ ಸೂಚಿಸಿದ್ದಾರೆ ಎಂದು ಸಚಿವ ಎಸ್ ಟಿ.ಸೋಮಶೇಖರ್ ತಿಳಿಸಿದರು.
ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ದಸರಾ ಹಬ್ಬಕ್ಕೆ ಹೆಚ್ಚು ಮಂದಿ ಪ್ರವಾಸಿಗರು ಜಿಲ್ಲೆಗೆ ಬರುತ್ತಾರೆ ಎಂಬ ಕಾರಣಕ್ಕೆ ಮೈಸೂರು ಜಿಲ್ಲಾಡಳಿತವು ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಮೈಸೂರು ಹಾಗೂ ಮೈಸೂರಿನ ಸುತ್ತಮುತ್ತಲ ಪ್ರವಾಸಿ ತಾಣಗಳ ಮೇಲೆ ನಿರ್ಬಂಧವನ್ನು ಹೇರಿತ್ತು. ಈ ನಿರ್ಬಂಧಕ್ಕೆ ಎಲ್ಲೆಡೆಯಿಂದಲೂ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
You must be logged in to post a comment.