ಮೈಸೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಅಣೆಕಟ್ಟೆಯ ನೀರಿನ ಮಟ್ಟ ಏರಿಕೆಯಾಗಿದೆ. ಸದ್ಯ ಜಲಾಶಯದ ನೀರಿನ ಮಟ್ಟ 100 ಅಡಿಗೆ ತಲುಪಲಿದೆ.
ಜಲಾಶಯದ ಒಳ ಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಪ್ರಮಾಣದ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ದಿನಕ್ಕೆ ಹೋಲಿಸಿದರೆ ಈ ಬಾರಿ 18 ಅಡಿ ನೀರು ಹೆಚ್ಚಾಗಿದೆ.
ಮಂಗಳವಾರ ಬೆಳಗ್ಗೆ 6,324 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಇಂದು 8,972 ಕ್ಯೂಸೆಕ್‍ಗೆ ಏರಿಕೆಯಾಗಿದೆ. ಅಣೆಕಟ್ಟೆಯಲ್ಲಿ ಒಳ ಹರಿವು ಹೆಚ್ಚಾಗಿರುವುದರಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ.
- ಅಣೆಕಟ್ಟೆಯ ಗರಿಷ್ಠ ನೀರಿನ ಮಟ್ಟ 124.80 ಅಡಿ
- ಇಂದಿನ ನೀರಿನ ಮಟ್ಟ 100.33 ಅಡಿ
- ಅಣೆಕಟ್ಟೆ ಒಳಹರಿವು 8,972 ಕ್ಯೂಸೆಕ್
- ಹೊರ ಹರಿವು 458 ಕ್ಯೂಸೆಕ್
- ಸದ್ಯ ಅಣೆಕಟ್ಟೆಯಲ್ಲಿ ಸಂಗ್ರಹವಾಗಿರುವ ನೀರು 22.654 ಟಿಎಂಸಿ
ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು
ಇನ್ನೊಂದೆಡೆ ಕೇರಳ ಭಾಗದಲ್ಲಿ ಮಳೆ ಹೆಚ್ಚಾಗಿದ್ದು ಈ ಹಿನ್ನೆಲೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಒಳಹರಿವು 10 ಸಾವಿರ ಕ್ಯೂಸೆಕ್. ಜಲಾಶಯದ ಇಂದಿನ ಒಳಹರಿವು 11,324 ಕ್ಯೂಸೆಕ್, ಜಲಾಶಯದ ಇಂದಿನ ಹೊರಹರಿವು 1500 ಕ್ಯೂಸೆಕ್, ಜಲಾಶಯದ ಇಂದಿನ ನೀರಿನ ಮಟ್ಟ 2267.88 ಅಡಿ, ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿ, ಜಲಾಶಯದ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 19.52 ಟಿಎಂಸಿ, ಜಲಾಶಯದಲ್ಲಿ ಇಂದು ಇರುವ ನೀರಿನ ಸಂಗ್ರಹ 10.67 ಟಿಎಂಸಿ.