ಕಬಿನಿ ಡ್ಯಾಂನಿಂದ 60ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ

ಮೈಸೂರು: ಹೆಚ್ ಡಿ ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ. ಜಲಾಶಯದಿಂದ 60,000 ಕ್ಯೂಸೆಕ್ ನೀರನ್ನು ಹೊರ ಬಿಡುಗಡೆ.

ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಕಬಿನಿ ಡ್ಯಾಂ ನೀರಿನ ಹೊರ ಹರಿವಿನ ಬಗ್ಗೆ ಮಾಹಿತಿ ನೀಡಿದ್ದು, 60ಸಾವಿರ ಕ್ಯೂಸೆಕ್ಸ್ ನೀರು ಕಬಿನಿ ಡ್ಯಾಂನಿಂದ ಹೊರಕ್ಕೆ ಬಿಡಲಾಗುತ್ತಿದೆ ಎಂದಿದ್ದಾರೆ.

ಸುತ್ತೂರು ಸೇತುವೆ, ಬಿದರಳ್ಳಿ ಸೇತುವೆ ಮೇಲೆ ನೀರು ಹರಿಯಲಿದ್ದು, ಶೀಘ್ರವೇ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

ಕೇರಳದ ವೈನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಿದ್ದು, ಕಳೆದ ಎರಡು ದಿನದಲ್ಲಿ 10 ಅಡಿ ಡ್ಯಾಂ ಭರ್ತಿಯಾಗಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದ್ದು, ಕಬಿನಿ ಡ್ಯಾಂನ ಕ್ಷಣಕ್ಷಣದ ಮಾಹಿತಿಯನ್ನು ಮೈಸೂರು ಜಿಲ್ಲಾಡಳಿತ ನೀಡುತ್ತಿದೆ. ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ.

Leave a Comment

Scroll to Top