ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಯದುವೀರ್

ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ: ಯದುವೀರ್

ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಯದುವೀರ್

ಮೈಸೂರು: ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯವೆಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿದ್ದಾರೆ.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾರಂಪರಿಕ ಕಟ್ಟಡಗಳೆಂದರೆ ಅವು ಕೇವಲ ಇಟ್ಟಿಗೆ, ಸಿಮೆಂಟ್ ಮಾತ್ರವಲ್ಲ. ಮೈಸೂರಿಗರಿಗೆ ಅದು ಅಸ್ಮಿತೆಯ ಸಂಗತಿ. ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯ.

ಆದರೆ ನಗರದ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಹಾಗೂ ದೇವರಾಜ ಮಾರುಕಟ್ಟೆಯನ್ನು ಕೆಡವಿ ಪುನರ್ ನಿರ್ಮಾಣ ಮಾಡಲು ಸರಕಾರ ಮುಂದಾಗಿದೆ. ಶಿಥಿಲಗೊಂಡಿದೆ ಎಂಬ ನೆಪ್ಪವೊಡ್ಡಿ ನಗರದ ಎಲ್ಲಾ ಪಾರಂಪರಿಕ ಕಟ್ಟಡಗಳನ್ನ ಕೆಡವುತ್ತಾ ಹೋದರೆ ಮೈಸೂರನ್ನು ‘ಸಾಂಸ್ಕೃತಿಕ ನಗರಿ’ ಎನ್ನಲು ಏನೂ ಉಳಿವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ತಜ್ಞರ ವರದಿಗಳ ಪ್ರಕಾರ ಈ ಎರಡು ಪಾರಂಪರಿಕ ಕಟ್ಟಡಗಳನ್ನ ಪುನರುಜ್ಜೀವನ ಗೊಳಿಸಲು ಅವಕಾಶವಿದೆ. ಇದಕ್ಕಾಗಿ ಹಲವಾರು ರೀತಿಯ ತಂತ್ರಜ್ಞಾನಗಳು ಚಾಲ್ತಿಯಲ್ಲಿವೆ. ಜೈಪುರ ಸೇರಿದಂತೆ ದೇಶದ ಹಲವಾರು ನಗರಗಳಲ್ಲಿ ಕುಸಿಯುವ ಹಂತದಲ್ಲಿದ ಕಟ್ಟಡಗಳನ್ನ ಉಳಿಸಿಕೊಳ್ಳಲಾಗಿದೆ. ಅದೇ ರೀತಿ ಮೈಸೂರಿನ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಹಾಗೂ ದೇವರಾಜ ಮಾರುಕಟ್ಟೆಗಳನ್ನು ಉಳಿಸಿಕೊಳ್ಳಬೇಕು. ಅರಮನೆ ವತಿಯಿಂದ‌ ಪಾರಂಪರಿಕ ಕಟ್ಟಡ ಸಂರಕ್ಷಣೆ ಸಂಬಂಧ ಎರಡು ತಜ್ಞ ವರದಿ ತರೆಸಿಕೊಳ್ಳಲಾಗಿದೆ‌.

ಎರಡರಲ್ಲೂ ಕಟ್ಟಡಗಳನ್ನು ಯತ್ತಾಸ್ಥಿತಿಯಲ್ಲಿ ಉಳಿಸಿಕೊಂಡು ಬಳಕೆಗೆ ಅವಕಾಶ ನೀಡಬಹುದು ಎಂದೇ ಉಲ್ಲೇಖಿಲಾಗಿದೆ. ಮಹಾನಗರ ಪಾಲಿಕೆಗೆ ಕೆಡವುದರಲ್ಲಿ ಯಾಕಿಷ್ಟು ಆಸಕ್ತಿ ತೋರುತ್ತಿದೆ ಎಂಬುದಕ್ಕೆ ನನ್ನ ಬಳಿ ಉತ್ತರವಿಲ್ಲ. ಸರ್ಕಾರ ಬಯಸಿದರೆ ಈ ವಿಚಾರವಾಗಿ ನಾನು ಚರ್ಚಿಸಲು ಸಿದ್ದನಿದ್ದೇನೆ ಎಂದು ಯದುವೀರ್ ಹೇಳಿಕೆ ನೀಡಿದ್ದಾರೆ.

Leave a Comment

Scroll to Top