ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಯದುವೀರ್

ಕಾಡು ರಕ್ಷಿಸಲು ಇಲಾಖೆಗೆ ಸಹಾಯ ಮಾಡೋಣ- ಯದುವೀರ್ ಒಡೆಯರ್ ಮನವಿ

ಮೈಸೂರು: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಳೆದ 5 ದಿನಗಳಿಂದ ಕಾಡ್ಗಿಚ್ಚು ಸಂಭಿಸಿದ್ದು, ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರಾದ ದರ್ಶನ್ , ಪುನೀತ್ ಮನವಿಯ ಬೆನ್ನಲ್ಲೇ ಇದೀಗ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಕೂಡ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಯದುವೀರ್, ದಯವಿಟ್ಟು ಈ ಬಗ್ಗೆ ಸುದ್ದಿ ಹರಡಿ ನಮ್ಮ ಕಾಡನ್ನು ರಕ್ಷಿಸಲು ಅರಣ್ಯ ಇಲಾಖೆಗೆ ಸಹಾಯ ಮಾಡೋಣ ಎಂದು ಜನರಲ್ಲಿ ಕೇಳಿಕೊಂಡಿದ್ದಾರೆ.

ಮನವಿಯೇನು..?

ಸ್ನೇಹಿತರೇ, ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನ ಸುದ್ದಿ ತಿಳಿಯಲು ಬಹಳ ನೋವಾಗಿದೆ. ಅಂದಾಜು ಸುಮಾರು 20,000 ಎಕರೆ ಅರಣ್ಯಪ್ರದೇಶದ ಪ್ರಾಣಿಸಂಕುಲ ಹಾಗು ಸಸ್ಯಸಂಕುಲಕ್ಕೆ ಅಪಾರ ಹಾನಿ ಉಂಟಾಗಿದೆ. ನಮ್ಮ ಪರಿಸರ ಪರಂಪರೆಗೆ ಸಂಭವಿಸಿರುವ ಈ ನಷ್ಟವು ಬಹಳ ದುಃಖಕರ ಸಂಗತಿಯಾಗಿದೆ.

ಅರಣ್ಯ ಇಲಾಖೆಯವರಿಗೆ ಸ್ವಯಂಸೇವಕರು ಬೇಕಾಗಿದ್ದಾರೆ ಹಾಗು ಸಾರ್ವಜನಿಕರಿಂದ ಸಹಾಯ ಕೋರಿದ್ದಾರೆ. ಬಂಡೀಪುರ ಪ್ರವೇಶದ ಚೆಕ್ ಪೋಸ್ಟ್ ಕಚೇರಿಯಲ್ಲಿ ನೀವು ನೀರಿನ ಬಾಟಲಿಗಳು, ಗ್ಲುಕೋಸ್, ಔಷಧ, (ವಿಶೇಷವಾಗಿ ಸುಟ್ಟ ಗಾಯಗಳ ಔಷಧ), ಇತರೆ ಅಗ್ನಿಶಾಮಕ ಅಗತ್ಯತೆಗಳು, ಆಹಾರ ಮತ್ತು ಇತರೆ ಸರಬರಾಜುಗಳನ್ನು ನೀಡಬಹುದಾಗಿದೆ.

ದಯವಿಟ್ಟು ಈ ಸುದ್ದಿ ಹರಡಿ ನಮ್ಮ ಕಾಡನ್ನು ರಕ್ಷಿಸಲು ಅರಣ್ಯ ಇಲಾಖೆಯ ಸಹಾಯ ಮಾಡೋಣ ಎಂದು ಬರೆದುಕೊಂಡಿದ್ದಾರೆ.

ಸ್ನೇಹಿತರೆ,ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನ ಸುದ್ದಿ ತಿಳಿಯಲು ಬಹಳ ನೋವಾಗಿದೆ. ಅಂದಾಜು ಸುಮಾರು ೨೦,೦೦೦…

Yaduveer Krishnadatta Chamaraja Wadiyar ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಭಾನುವಾರ, ಫೆಬ್ರವರಿ 24, 2019

Leave a Comment

Scroll to Top