ತುಮಕೂರು: ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಕರೆತರಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಯದುವೀರ್ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್, ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದೆವು. ಹಾಗೇ ಶ್ರೀಗಳನ್ನ ನೋಡಲು ಬಂದಿದ್ದೇನೆ. ಶ್ರೀಗಳು ಆರೋಗ್ಯವಾಗಿದ್ದಾರೆ, ಅವರು ಚೇತರಿಸಿಕೊಳ್ಳಲಿ ಎಂದು ತಾಯಿ ಚಾಮುಂಡೇಶ್ವಯಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು. ಶ್ರೀಗಳು ವಿಶ್ರಾಂತಿಯಲ್ಲಿದ್ದಾರೆ ಅವರನ್ನು ಎಚ್ಚರಿಸಲು ಹೋಗಲಿಲ್ಲ. ಅವರ ಜೊತೆ ಮಾತನಾಡುವ ಅವಕಾಶ ಸಿಗಲಿಲ್ಲ. ಹಾಗಾಗಿ ನಾನು ಅವರ ಆಶೀರ್ವಾದ ಪಡೆದುಕೊಂಡು, ಅವರನ್ನು ನೋಡಿಕೊಂಡು ಬಂದೆ” ಎಂದು ಹೇಳಿದರು.
ಇನ್ನು ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ಹೋಗುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ಶ್ರೀಗಳನ್ನು ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ ನೀಡುತ್ತಿದ್ದ ಚಿಕಿತ್ಸೆ ಮಠದಲ್ಲೇ ಮುಂದುವರೆಸಲಾಗಿದೆ.