71 ವರ್ಷಗಳ ಕಾಯುವಿಕೆ ಅಂತ್ಯ: ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

ಸಿಡ್ನಿ: ಸಿಡ್ನಿಯಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಡ್ರಾ ದಲ್ಲಿ ಅಂತ್ಯಗೊಂಡಿದ್ದು, ಟೀಂ ಇಂಡಿಯಾ 2-1 ಅಂರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ.

ಮಳೆಯ ಕಾರಣ ಇಂದು 5ನೇ ದಿನದಾಟ ಒಂದೂ ಎಸೆತ ಕಾಣದೆ ರದ್ದುಗೊಂಡಿತು. ಇದರೊಂದಿಗೆ 4 ಪಂದ್ಯಗಳ ಈ ಸರಣಿಯನ್ನು ಭಾರತ 2-1ರಿಂದ ಗೆದ್ದುಕೊಂಡಿದೆ. ಈ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ಟೀಂಇಂಡಿಯಾ ಬರೋಬ್ಬರಿ 7 ದಶಕಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಜಯ ಸಾಧಿಸಿದೆ.

ಅತ್ಯದ್ಭುತ ಪ್ರದರ್ಶನ ತೋರಿದ ಚೇತೇಶ್ವರ್ ಪೂಜಾರ ಪಂದ್ಯ ಪಂದ್ಯ ಶ್ರೇಷ್ಠ ಗೌರವಕ್ಕೆ ಭಾಜನರಾದರು.

ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ:

71 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಭಾರತ ಟೆಸ್ಟ್ ಸರಣಿ ತನ್ನದಾಗಿಸಿಕೊಮಡಿದೆ. 1947–48ರಿಂದ ಭಾರತ ತಂಡವು ಆಸ್ಟ್ರೇಲಿಯಾಕ್ಕೆ ಪ್ರವಾಸ ಕೈಗೊಳ್ಳುತ್ತಿದೆ. ಭಾರತ 1947-48ರಿಂದ 2014-15ರ ವರಗೆ ಆಸಿಸ್ ಪ್ರವಾಸ ಕೈಗೊಂಡಿದ್ದರೂ ಒಮ್ಮೆಯೂ ಟೆಸ್ಟ್ ಸರಣಿ ಗೆಲುವು ಕನಸಾಗಿಯೇ ಉಳಿದಿತ್ತು. ಆದರೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಆಸಿಸ್ ಬಗ್ಗು ಬಡಿಯುವ ಮೂಲಕ ಕಾಂಗರೂ ನೆಲದಲ್ಲಿ ಇತಿಹಾಸ ಬರೆದಿದೆ.

ಇನ್ನು ಮೆಲ್ಬರ್ನ್’ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಭಾರತ 137 ರನ್’ಗಳಿಂದ ಜಯಿಸುವ ಮೂಲಕ 2-1ರ ಮುನ್ನಡೆ ಸಾಧಿಸಿತ್ತು.

ಸರಣಿ ಶ್ರೇಷ್ಠ: ಚೇತೇಶ್ವರ್ ಪೂಜಾರ (ಮೂರು ಶತಕ, ಒಟ್ಟಾರೆ 521 ರನ್ )

Scroll to Top