
ಮುಂಬೈ: ನಿನ್ನೆ ನಡೆದ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ನ ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಧೋನಿ ಮಾಡಿದ್ದ ದಾಖಲೆಯೊಂದನ್ನು ಮುರಿದ್ದಾರೆ.
ಹೌದು ರಿಷಬ್ ಈ ಹೊಡೆಬಡಿಯ ಇನಿಂಗ್ಸ್ ನಿಂದಾಗಿ ಧೋನಿ ಮಾಡಿದ್ದ ದಾಖಲೆಯೊಂದನ್ನು ಮುರಿದರು. ಕೇವಲ 18 ಎಸೆತಗಳಲ್ಲಿ ಗಳಲ್ಲಿ 50 ರನ್ ಸಿಡಿಸಿದ ಪಂತ್ ಐಪಿಎಲ್ ನಲ್ಲಿ ‘ಮುಂಬೈ ವಿರುದ್ಧ’ ಅತೀ ವೇಗದ ಅರ್ಧಶತಕ ಗಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಮಾಜಿ ನಾಯಕ ಎಂಎಸ್ ಧೋನಿಗೆ ಬದಲಿ ಆಟಗಾರ ಭವಿಷ್ಯದ ವಿಕೆಟ್ ಕೀಪರ್ ಎಂದೆಲ್ಲ ಗುರುತಿಸಿಕೊಂಡಿದ್ದ ರಿಷಬ್ ಪಂತ್ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಾಗ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದರು. ಆದರೆ ಐಪಿಎಲ್ ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಮ್ಮ ಪರಾಕ್ರಮವನ್ನು ತೋರಿಸಿದ್ದಾರೆ.
ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದಲ್ಲಿ 27 ಎಸೆತಗಳಲ್ಲೇ 7 ಸಿಕ್ಸರ್ ಹಾಗೂ 7 ಬೌಂಡರಿ ನೆರವಿನಿಂದ 78 ರನ್ ಪೇರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
You must be logged in to post a comment.