ಓರ್ವ ಕನ್ನಡಿಗ ಸೇರಿ ಆರ್‌ಸಿಬಿ ತಂಡಕ್ಕೆ 8 ಹೊಸ ಆಟಗಾರರ ಎಂಟ್ರಿ

ಬೆಂಗಳೂರು: ಪ್ರತಿ ಬಾರಿಯೂ ಗೆಲ್ಲುವ ಜೋಶ್ ನಲ್ಲೇ ಆರ್‌ಸಿಬಿ ತಂಡ ಕಣಕ್ಕಿಳಿಯುತ್ತಿದೆ. ಆದರೆ ಚಾಂಪಿಯನ್ ಪಟ್ಟ ಮಾತ್ರ ಕನಸಾಗಿಯೇ ಉಳಿದಿದೆ. ಇದೀಗ 2020ಯಲ್ಲಿ ನಡೆಯಲಿರುವ ಐಪಿಎಲ್ ತಂಡಕ್ಕೆ ಹೊಸ ಆಟಗಾರರನ್ನು ತಂಡ ಖರೀದಿಸಿದೆ.

ಇಂದು ನಡೆದ ಹರಾಜಿನಲ್ಲಿ ಆ್ಯರೋನ್ ಪಿಂಚ್, ಕ್ರಿಸ್ ಮೋರಿಸ್, ಡೇಲ್ ಸ್ಟೈನ್, ಕೇನ್ ರಿಚರ್ಡಸನ್, ಇಸ್ರು ಉದಾನ, ಜೋಶ್ ಪಿಲಿಪ್, ಶಹ್ಜಾಬ್ ಅಹ್ಮದ್ ಮತ್ತು ಪವನ್ ದೇಶಪಾಂಡೆ ತಂಡವನ್ನು ಸೇರಿಕೊಂಡಿದ್ದಾರೆ.

ಆರ್‌ಸಿಬಿ ತಂಡದಲ್ಲೇ ಉಳಿದುಕೊಂಡಿದ್ದ ಆಟಗಾರರು, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಪಾರ್ಥಿವ್ ಪಟೇಲ್, ಶಿವಂ ದುಬೆ, ಗುರುಕ್ರಿತ್ ಮನ್ ಸಿಂಗ್, ಪವನ್ ನೇಗಿ, ಮೊಯಿನ್ ಅಲಿ, ಯಜುವೇಂದ್ರ ಚಹಾಲ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ನವದೀಪ್ ಸೈನಿ.

ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡಿದೆ. 332 ಆಟಗಾರರ ಪೈಕಿ 8 ತಂಡಗಳು ಸೇರಿ ಒಟ್ಟು 73 ಆಟಗಾರರನ್ನು ಖರೀದಿಸಿದ್ದಾರೆ.

ಈ ಬಾರಿಯ ಹರಾಜು ಪ್ರಕ್ರಿಯೆಯಲ್ಲಿ ಗರಿಷ್ಠ ಮೊತ್ತಕ್ಕೆ ಸೇಲ್ ಆಗಿದ್ದು ಆಸ್ಟ್ರೇಲಿಯಾ ಆಟಗಾರ ಪ್ಯಾಟ್ ಕಮಿನ್ಸ್​. ಇವರು ಬರೋಬ್ಬರಿ 15 ಕೋಟಿಯ 50 ಲಕ್ಷಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ಸೇರಿಸಿಕೊಂಡಿದ್ದಾರೆ. ನಂತರ ಗ್ಲೆನ್ ಮ್ಯಾಕ್ಸ್​ವೆಲ್​ 10 ಕೋಟಿ 75 ಲಕ್ಷಕ್ಕೆ ಕಿಂಗ್ಸ್​ ಇಲೆವೆನ್ ತನ್ನ ತೆಕ್ಕೆಗೆ ಸೇರಿಸಿಕೊಂಡಿದೆ.

Scroll to Top