ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸಿದೆ.

299 ರನ್ ಗಳ ಗುರಿ ಬೆನ್ನಟ್ಟಿದ ಭಾರತ ತಂಡ ವಿರಾಟ್ ಕೊಹ್ಲಿ ಶತಕ ಹಾಗೂ ಎಂ.ಎಸ್ ದೋನಿ ಅವರ ಅರ್ಧ ಶತಕದ ನೆರವಿನಿಂದ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.

ಇನ್ನು ಕಳೆದ ಪಂದ್ಯದಲ್ಲಿ ನಿದಾನಗತಿ ಬ್ಯಾಟಿಂಗ್ ನಡೆಸಿದ್ದಕ್ಕೆ ಟೀಕೆಗೆ ಗುರಿಯಾಗಿದ್ದ ದೋನಿ ಈ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವೇನೆಂಬುದನ್ನು ತೋರಿಸಿಕೊಟ್ಟಿದ್ದಾರೆ. 54 ಎಸೆತಗಳಲ್ಲಿ 55 ರನ್ ಗಳಿಸಿ ತಂಡಕ್ಕೆ ಗೆಲುವಿನ ಕಾಣಿಕೆ ನೀಡಿದರು.

ಟಾಸ್ ಗೆದ್ದು ಬ್ಯಾಟಿಂಗ್ ಪ್ರಾರಂಭಿಸಿದ ಆಸ್ಟ್ರೇಲಿಯಾ ಶಾನ್ ಮಾರ್ಶ್ ಅಮೋಘ ಶತಕದ (131) ದ ನಎರವಿನಿಂದ 298ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತ್ತು. ಪ್ರಾರಂಭದಲ್ಲಿ ಕಳಪೆ ಆಟವಾಡಿದ್ದ ಆಸ್ಟ್ರೇಲಿಯಾ 189 ರನ್ ಗಳಿಸುವಷ್ಟರಲ್ಲಿ ಐದು ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ತಂಡಕ್ಕೆ ಆಸರೆಯಾದ ಶಾನ್ ಮಾರ್ಶ್ 123 ಎಸೆತಗಳಲ್ಲಿ 131 ರನ್ (11 ಬೌಂಡರಿ,3 ಸಿಕ್ಸರ್) ಕಲೆ ಹಾಕಿದ್ದರು. ಆಲ್ ರೌಂಡರ್ ಮ್ಯಾಕ್ಸ್ ವೆಲ್ (48), ಇವರಿಗೆ ಉತ್ತಮ ಜತೆಯಾಗಿದ್ದರು.

ಭಾರತ ಪರ (4), ಮಹಮ್ಮದ್ ಶಮಿ (3) ವಿಕೆಟ್ ಪಡೆದು ಮಿಂಚಿದ್ದಾರೆ.

Scroll to Top