
ಮುಂಬೈ: ಇಂಗ್ಲೆಂಡ್ನಲ್ಲಿ ನಡೆಯಲಿರುವ 2019ರ ಐಸಿಸಿ ಏಕದಿನ ವಿಶ್ವಕಪ್‌ಗೆ 15 ಆಟಗಾರರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿರಾಟ್ ಕೊಹ್ಲಿ ಕ್ಯಾಪ್ಟನ್ ಆಗಿ ಮುಂದುವರಿದಿದ್ದಾರೆ.
15 ಸದಸ್ಯರ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದ್ದು, ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಆಯ್ಕೆ ಮಾಡಿದೆ. ವಿಶ್ವಕಪ್ ಆರಂಭಕ್ಕೆ ಇನ್ನು 50 ದಿನಗಳು ಮಾತ್ರ ಬಾಕಿ ಇದ್ದು, ಬಿಸಿಸಿಐ ಪ್ರಕಟಿಸಿರುವ ಪಟ್ಟಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದು, ಕನ್ನಡಿಗರಿಗೆ ಖುಷಿ ತಂದಿದೆ.
ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ತಂಡವನ್ನು ಪ್ರಕಟಿಸಿದ್ದು, ಇದಕ್ಕೂ ಮುನ್ನ ಆಯ್ಕೆ ಸಮಿತಿ ಸದಸ್ಯರೊಂದಿಗೆ ನಾಯಕ ವಿರಾಟ್ ಕೊಹ್ಲಿ, ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಅವರೊಂದಿಗೆ ಸಭೆ ಏರ್ಪಡಿಸಲಾಗಿತ್ತು.
ತಂಡ ಇಂತಿದೆ: ವಿರಾಟ್ ಕೊಹ್ಲಿ- ನಾಯಕ, ರೋಹಿತ್ ಶರ್ಮ- ಉಪ ನಾಯಕ, ಶಿಖರ್ ಧವನ್, ಎಂಎಸ್ ಧೋನಿ (ವಿಕೆಟ್ ಕೀಪರ್), ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಕೆಎಲ್ ರಾಹುಲ್, ದಿನೇಶ್ ಕಾರ್ತೀಕ್, ರವೀಂದ್ರ ಜಡೇಜಾ, ವಿಜಯ್ ಶಂಕರ್.
BREAKING: India have named their #CWC19 squad! pic.twitter.com/mMXt5kAG6Y
— Cricket World Cup (@cricketworldcup) April 15, 2019
You must be logged in to post a comment.