ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಗೆಲುವು ಸಾಧಿಸಿದ ಕರ್ನಾಟಕ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟ್ ಮಾಡಿದ ತಮಿಳುನಾಡು 49.5 ಓವರ್ ಗಳಲ್ಲಿ 252 ರನ್‍ಗಳಿಗೆ ಆಲೌಟ್ ಆಯ್ತು. ಈ ಮೊತ್ತವನ್ನು ಬೆನ್ನಟ್ಟುವ ಸಂದರ್ಭದಲ್ಲಿ 23 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು 141 ರನ್‍ಗಳಿಸಿದಾಗ ಜೋರಾಗಿ ಮಳೆ ಸುರಿಯಲು ಆರಂಭವಾಯಿತು. ಮಳೆ ನಿಲ್ಲದ ಪರಿಣಾಮ ವಿ ಜಯದೇವನ್ ಮಾದರಿ ಅಥವಾ ವಿಜೆಡಿ ನಿಯಮದ ಅನ್ವಯ ಕರ್ನಾಟಕ 60 ರನ್ ಗಳಿಂದ ಗೆದ್ದುಕೊಂಡಿದೆ ಎಂದು ಪ್ರಕಟಿಸಲಾಯಿತು.
ಇನ್ನು ವಿಜಯ್ ಹಜಾರೆ ಟ್ರೋಫಿ ಇತಿಹಾಸದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಕನ್ನಡಿಗನೆಂಬ ಖ್ಯಾತಿಗೆ ವೇಗದ ಬೌಲರ್ ಅಭಿಮನ್ಯು ಮಿಥುನ್ ಅವರು ಭಾಜನರಾಗಿದ್ದಾರೆ. ವಿನೂತನ ದಾಖಲೆ ಮಾಡಿದ ಮಿಥುನ್ಗೆ ಕ್ರೀಡಾಭಿಮಾನಿಗಳು ಶುಭಾಶಯಗಳ ಸುರಿಮಳೆಗೈಯುತ್ತಿದ್ದಾರೆ.