ಪ್ರಣಬ್ ಮುಖರ್ಜಿ ಸೇರಿದಂತೆ ಮೂವರಿಗೆ ಭಾರತ ರತ್ನ
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಮೂವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಹಿಂದಿ ಚಿತ್ರರಂಗದ ಸಾಧಕ ಡಾ. ಭೂಪೇನ್ ಹಜಾರಿಕಾ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶಮುಖ್ ದೇಶದ ಅತ್ಯುನ್ನತ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಸಂಬಂಧ ರಾಷ್ಟ್ರಪತಿ ಭವನದ ಪ್ರಕಟಣೆ ಹೊರಡಿಸಲಾಗಿದೆ. ನಾಳೆ (ಶನಿವಾರ) ಗಣರಾಜ್ಯೋತ್ಸವದಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಾಧಕರಿಗೆ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.
ಪ್ರಣಬ್ ಮುಖರ್ಜಿ ಸೇರಿದಂತೆ ಮೂವರಿಗೆ ಭಾರತ ರತ್ನ Read More »