ಚಂದ್ರಯಾನ 2: ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಂ ಲ್ಯಾಂಡರ್​

ಬೆಂಗಳೂರು: ಜಾಗತಿಕವಾಗಿ ಭಾರತಕ್ಕೆ ಮಹತ್ವದ ಸ್ಥಾನ ಕಲ್ಪಿಸಿಕೊಡಲಿರುವ ಚಂದ್ರಯಾನ-2 ಪ್ರಮುಖ ಹಂತವಾಗಿ ವಿಕ್ರಂ ಲ್ಯಾಂಡರ್​ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಆಗುವ ಪ್ರಕ್ರಿಯೆಯಲ್ಲಿ ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿದೆ. ಇಸ್ರೋ ವಿಜ್ಞಾನಿಗಳು ಲ್ಯಾಂಡರ್​ ಕಳುಹಿಸಿದ ದತ್ತಾಂಶವನ್ನು ವಿಶ್ಲೇಷಣೆ ಮಾಡುತ್ತಿದ್ದಾರೆ. 2.1 ಕಿ.ಮೀ. ವರೆಗೆ ಚಲಿಸಿದ ನಂತರ ಸಿಗ್ನಲ್ ಸ್ಥಗಿತವಾಗಿದೆ. ದತ್ತಾಂಶ ವಿಶ್ಲೇಷಣೆ ಮಾಡಲಾಗುತ್ತಿದೆ ಎಂದು ಇಸ್ರೊ ಅಧ್ಯಕ್ಷ ಕೆ. ಶಿವನ್ ಮಾಹಿತಿ ನೀಡಿದರು. ಇಸ್ರೋ ವಿಜ್ಞಾನಿಗಳು ವಿಕ್ರಂ ಲ್ಯಾಂಡರ್​ನೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಚಂದ್ರನ […]

ಚಂದ್ರಯಾನ 2: ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಂ ಲ್ಯಾಂಡರ್​ Read More »